ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ : ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಸಚಿವ ಮುರುಗೇಶ್ ನಿರಾಣಿ 

ಚಿಕ್ಕಬಳ್ಳಾಪುರ,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ಜಿಲೆಟಿನ್ ಸ್ಫೋಟ. ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ. ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

Chikkaballapur-Gelatine-explosion-Whoever-involved-Impeccably-Action-Minister-Murugesh Nirani

ಸರ್ಕಾರ ಸೂಕ್ತ ತನಿಖೆ ನಡೆಸಲಿದೆ

ಶಿವಮೊಗ್ಗ ಸ್ಫೋಟದ ನಂತರ ಇಂತಹ ಘಟನೆ ನಡೆದಿರುವುದು ತುಂಬಾ ದುರದೃಷ್ಟಕರ. ಸರ್ಕಾರ ಸೂಕ್ತ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Chikkaballapur-Gelatine-explosion-Whoever-involved-Impeccably-Action-Minister-Murugesh Nirani
ಕೃಪೆ- internet

ಹಿರೆನಾಗವಳ್ಳಿಯಲ್ಲಿ ಜಿಲೆಟಿನ್ ಸ್ಫೋಟದಲ್ಲಿ 5 ಜನರು ಸಾವನ್ನಪ್ಪಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಅವರ ಆತ್ಮಕ್ಕೆ ಚಿರಶಾಂತಿ‌ಸಿಗಲಿ ಹಾಗೂ ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

key words : Chikkaballapur-Gelatine-explosion-Whoever-involved-Impeccably-Action-Minister-Murugesh Nirani