ಜೂನ್ 19 ರ ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ರೆಡಿ

Promotion

ಬೆಂಗಳೂರು, ಜೂನ್ 16, 2022 (www.justkannada.in): ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಜೂನ್ 19 ರಂದು ಟಿ20 ಪಂದ್ಯ ನಡೆಯಲಿದೆ.

ಪಂದ್ಯದ ಹಿನ್ನೆಲೆಯಲ್ಲಿ ಗೃಹಸಚಿವರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯ ಮಾಹಿತಿ ಪಡೆದುಕೊಂಡಿದ್ದಾರೆ.

ಐದು ದಿನಗಳ ಟೆಸ್ಟ್ ಪಂದ್ಯಕ್ಕೆ ಭದ್ರತೆ ಶುಲ್ಕವನ್ನು ಹೆಚ್ಚಿರುವ ಹಿನ್ನೆಲೆಯಲ್ಲಿ ಪರಿಷ್ಕರಣೆ ಮಾಡಬೇಕೆಂದು ಗೃಹಸಚಿವರಿಗೆ ರೋಜರ್ ಬಿನ್ನಿ ಮನವಿ ಮಾಡಿದ್ದಾರೆ.

ಇದಕ್ಕೆ ಸ್ಪಂದಿಸಿದ ಗೃಹಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆ ಭದ್ರತೆ ಶುಲ್ಕವನ್ನು ನಾಲ್ಕು ಪಟ್ಟು ಹೆಚ್ಚಳ ಮಾಡಿದೆ.