ಸಿಟಿ ಸ್ಕ್ಯಾನಿಂಗ್ ದುಬಾರಿ ದರಕ್ಕೆ ಕಡಿವಾಣ: ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿಗೊಳಿಸಿ ಸಚಿವ ಸುಧಾಕರ್ ಆದೇಶ…

ಬೆಂಗಳೂರು,ಮೇ,7,2021(www.justkannada.in): ಸಿಟಿ ಸ್ಕ್ಯಾನಿಂಗ್ ದುಬಾರಿ ದರಕ್ಕೆ ಕಡಿವಾಣ ಹಾಕಲು ನಿರ್ಧರಿಸಲಾಗಿದ್ದು,   ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ.jk

ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಬಂದ  ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.City scanning – cost-  Minister Sudhakar- orders- price - private hospitals

ಸರಕಾರಿ ವ್ಯವಸ್ಥೆ ಅಡಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

Key words: City scanning – cost-  Minister Sudhakar- orders- price – private hospitals