ಬೆಂಗಳೂರು,ಡಿಸೆಂಬರ್ 11,2023(www.justkannada.in): ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ನಾಯಕರ ವಿರುದ್ದ ಅಸಮಾಧಾನಿತ ಹಾಗೂ ಉಚ್ಛಾಟಿತ ನಾಯಕರು ಸೆಡ್ಡು ಹೊಡೆದಿದ್ದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿಕೆ ನಾಣು ಅವರನ್ನ ನೇಮಕ ಮಾಡಿದ್ದಾರೆ.
ಇಂದು ನಡೆದ ಸಭೆಯಲ್ಲಿಉಚ್ಛಾಟಿತ ನಾಯಕ ಸಿಕೆ ನಾಣು ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಕೆ ನಾಣು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಇಬ್ರಾಹಿಂ, ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿ.ಕೆ.ನಾಣು ಅವರನ್ನು ನೇಮಕ ಮಾಡಲಾಗಿದೆ. ಇದು ನನ್ನ ನಿರ್ಣಯ ಅಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯ. ನಿತೀಶ್ ಕುಮಾರ್, ಲಾಲು ಪ್ರಸಾದ್ ಭೇಟಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು.
ಮಕ್ಕಳ ಹಿತ, ಎರಡು ಸೀಟ್ ಗಾಗಿ ಸಿದ್ಧಾಂತ ಬಲಿ ಕೊಟ್ಟಿದ್ದೀರಿ. ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕವನ್ನು ನಾಣುಗೆ ನೀಡಲಾಗಿದೆ. ನಾವು ಮೂರು ಅವಕಾಶ ಕೊಟ್ಟೆ. ಕೊನೆಗೆ ಇಂದು ಅವರನ್ನ(ದೇವೇಗೌಡ) ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿ ಸಿಕೆ ನಾಣು ಅವರಿಗೆ ಅಧಿಕಾರ ಕೊಟ್ಟಿದ್ದೇವೆ. ನಾನು ಹುಟ್ಟಿದ್ದು ಸಿದ್ದಾಂತಕ್ಕಾಗಿ. ವಾಜಪೇಯಿಯವರು ಮಂತ್ರಿಯಾಗಲು ಕರೆದರೂ ನಾನು ಹೋಗಲಿಲ್ಲ.ಗೌವರ್ನರ್ ಆಗಲು ಕರೆದದೂ ಹೋಗಲಿಲ್ಲ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.
Key words: CK Nanu- appointed – JDS -National President.