ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳ ತೆರವು ವಿಚಾರ: ಪ್ರತ್ಯೇಕ ವಿಧೇಯಕ ಮಂಡನೆಗೆ ನಿರ್ಧಾರ.

Promotion

ಬೆಂಗಳೂರು,ಸೆಪ್ಟಂಬರ್,20.2021(www.justkannada.in): ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದೆ.

ಇಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳನ್ನು ತೆರವು ಮಾಡದೇ ಇರುವ ಬಗ್ಗೆ ಸದನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆ ಮಾಡಲು  ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನು ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Key words: Clearing – temples – public –places- Decision -Separate –bill-session