ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಕಳಸಾ ಬಂಡೂರಿ ನೀರಾವರಿ ಯೋಜನೆಗಳಿಗೆ ಸಿಎಂ ಬಂಪರ್ ಕೊಡುಗೆ..

ಬೆಂಗಳೂರು,ಮಾರ್ಚ್,4,2022(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದೆ.  ಮೇಕೆದಾಟು ಯೋಜನೆಗೆ 1000 ಸಾವಿರ ಕೋಟಿ. ಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ 5ಸಾವಿರ ಕೋಟಿ ರೂಪಾಯಿ. ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರೂಪಾಯಿ ನೀಡಲಾಗುತ್ತದೆ ಎಂದಿದ್ದಾರೆ.mekeda

750 ಗ್ರಾ.ಪಂ.ಗಳಿಗೆ ತಲಾ 25 ಲಕ್ಷ ರೂಪಾಯಿ, ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗುವುದು. ಎರಡು ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು. ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿಎಂ ಘೋಷಣೆ ಮಾಡಿದರು.

ಇತರ ಘೋಷಣೆಗಳು: ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ 300 ಕೋಟಿ, ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ 188 ಕೋಟಿ, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ 1,600 ಕೋಟಿ ರೂ ಮೀಸಲು, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

Key words: CM-Basavaraj bommai-budget