ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

Promotion

ಬೆಂಗಳೂರು, ಜನವರಿ 02, 2021 (www.justkannada.in): ಕೋವಿಡ್ ಸಂಭಾವ್ಯ ಮೂರನೇ ಅಲೆಗೆ ನಾವು ಸಿದ್ಧರಾಗಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಮೂರನೇ ಅಲೆಗೆ ನಾವು ಸಿದ್ಧರಾಗಬೇಕಾಗಿದೆ, ಇದಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ಕೈಗೊಳ್ಳಬೇಕು, ಇದರ ಜೊತೆಗೆ ಆರ್ಥಿಕತೆಯೂ ಮುನ್ನಡೆಯಬೇಕಾಗಿದೆ ಎಂದು ತಿಳಿಸಿದ್ದಾರೆ.

ಕೇವಲ ನಿರ್ಬಂಧಗಳನ್ನು ಜಾರಿಗೊಳಿಸಿ ಸುಮ್ಮನಿರಲಾಗದು. ನಾವು ಈ ಸವಾಲನ್ನು ವಿಭಿನ್ನ ಕಾರ್ಯತಂತ್ರದಿಂದ ಎದುರಿಸಬೇಕು ಎಂದು ಸಿಎಂ ತಿಳಿಸಿದ್ದಾರೆ.

ದಕ್ಷತೆಯಿಂದ ಕಾರ್ಯನಿರ್ವಹಿಸಿ ರಾಜ್ಯದ ಆರ್ಥಿಕತೆಯನ್ನು ಉತ್ತಮ ಪಡಿಸಬೇಕು. ಕೋವಿಡ್ ಸಂಭಾವ್ಯ ಮೂರನೇ ಅಲೆಗೆ ನಾವು ಸಿದ್ಧರಾಗಬೇಕಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.