ಮೇಕೆದಾಟು ಪಾದಯಾತ್ರೆ ರಾಜಕೀಯ ಪ್ರೇರಿತ, ವೀಕೆಂಡ್ ಕರ್ಫ್ಯೂ ಉಲ್ಲಂಘನೆಗೆ ನೋಟಿಸ್ ಜಾರಿ: ಸಿಎಂ ಬೊಮ್ಮಾಯಿ

ಬೆಂಗಳೂರು, ಜನವರಿ 09, 2021 (www.justkannada.in): ಕಾಂಗ್ರೆಸ್ ನವರು 5 ವರ್ಷ ಅಧಿಕಾರದಲ್ಲಿದ್ದರು, ಸಮ್ಮಿಶ್ರ ಸರ್ಕಾರದಲ್ಲಿ ಡಿ ಕೆ ಶಿವಕುಮಾರ್ ಅವರು ಕೂಡ ನೀರಾವರಿ ಸಚಿವರಾಗಿದ್ದರು. ಹಾಗಾದರೆ ಆಗ ಅವರು ಮೇಕೆದಾಟು ಯೋಜನೆಯ ಬಗ್ಗೆ ಏನು ಮಾಡಿದರು ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಡಿಪಿಆರ್ ವರದಿಯನ್ನು ಆಗ ಅವರು ಸರಿಯಾಗಿ ಸಲ್ಲಿಕೆ ಮಾಡಿದ್ದರೆ ಯೋಜನೆ ಈಡೇರುತ್ತಿರಲಿಲ್ಲವೇ, ಸಮ್ಮಿಶ್ರ ಸರ್ಕಾರ ಬಂದ ಮೇಲೆ ಡಿಪಿಆರ್ ಬಂದಿರುವುದು, ಸಮ್ಮಿಶ್ರ ಸರ್ಕಾರದಲ್ಲಿ ಕೂಡ ಡಿಪಿಆರ್ ನ್ನು ಸರಿಯಾಗಿ ತೆಗೆದುಕೊಂಡು ಹೋಗಿಲ್ಲ ಎಂದು ಸಿಎಂ ಟೀಕಿಸಿದ್ದಾರೆ.

ಕಾಂಗ್ರೆಸ್ 5 ವರ್ಷ ಅಧಿಕಾರದಲ್ಲಿದ್ದರೂ ಡಿಪಿಆರ್ ನ್ನು ಸಲ್ಲಿಸಲಾಗಿಲ್ಲ, ಮೇಕೆದಾಟು ಪಾದಯಾತ್ರೆ ರಾಜಕೀಯ ಪ್ರೇರಿತ. ಕೋವಿಡ್ ನಿಯಮ ಉಲ್ಲಂಘಿಸಿ ವೀಕೆಂಡ್ ಕರ್ಫ್ಯೂ ವೇಳೆ ಪಾದಯಾತ್ರೆ ಮಾಡುತ್ತಿರುವುದಕ್ಕೆ ನೊಟೀಸ್ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.