ಡಿ.12ರಂದು ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಭೇಟಿ: ವಿವಿಧ ಕಾಮಗಾರಿಗೆ ಚಾಲನೆ.

Promotion

ಬೆಂಗಳೂರು,ಡಿಸೆಂಬರ್,10,2022(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಿದೆ.

ಬಿಜೆಪಿ ಸರಣಿ ಸಭೆಗಳ ಮೂಲಕ ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಡಿಸೆಂಬರ್ 12 ರಂದು ಚಾಮರಾಜನಗರ ಮತ್ತು ಹನೂರು ಕ್ಷೇತ್ರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.

ಹನೂರೂ ಕ್ಷೇತ್ರದಲ್ಲಿ 650 ಕೋಟಿ ವೆಚ್ಚದ ಕಾಮಗಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: CM –Basavaraj Bommai- visit – Chamarajanagar -December 12