ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ.

ಬೆಂಗಳೂರು,ಜನವರಿ,20,2023(www.justkannada.in):  ಗಣರಾಜ್ಯೋತ್ಸವ ಅಂಗವಾಗಿ  ನಡೆಯುತ್ತಿರುವ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಇಂದಿನಿಂದ 11 ದಿನಗಳ ಕಾಲ ವಿಶೇಷ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, 213ನೇ ವಿಶೇಷ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದು ಬಹಳ ಸಂತೋಷದಿಂದ  ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಿದ್ದೇನೆ. ಈ ಬಾರಿಯ ಫ್ಲವರ್ ಶೋ ತುಂಬ ಚೆನ್ನಾಗಿ ಮೂಡಿಬಂದಿದೆ. ಈ ಬಾರಿ 10 ರಿಂದ 15 ಲಕ್ಷ ಜನರು ಬರುವ ನಿರೀಕ್ಷೆಯಿದೆ. ಜನರನ್ನ ನಿಭಾಯಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ತೋಟಗಾರಿಕೆ ಇಲಾಖೆ ಮಾಡಿಕೊಂಡಿದೆ ಎಂದರು.

ಈ ಬಾರಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಬಗ್ಗೆ ತೋರಿಸಲಾಗುತ್ತಿದೆ. ಬೆಂಗಳೂರಿನ 1,500 ವರ್ಷಗಳ ಹಿಂದಿನ ಇತಿಹಾಸದ ಬಗ್ಗೆ, ಬೆಂಗಳೂರಿನ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ಇತಿಹಾಸದ ಮಾಹಿತಿಯನ್ನು ದೇಶದ ವಿವಿಧ ಬಗೆಯ ಪುಷ್ಪಗಳ ಮೂಲಕ ಪ್ರದರ್ಶಿಸಲಾಗುತ್ತದೆ.

ಅಲ್ಲದೆ ತೋಟಗಾರಿಕೆ ಇಲಾಖೆಯ ಲಾಲ್ ಬಾಗ್, ದೊಡ್ಡಸಾಗೆರೆ ಬಟಾನಿಕಲ್ ಗಾರ್ಡನ್, ಲಿಂಗಾಂಬೂದಿ ಬಟಾನಿಕಲ್ ಗಾರ್ಡನ್ ಸೇರಿದಂತೆ ವಿವಿಧ ಪ್ರಮುಖ ಆಕರ್ಷಣೆಗಳಿದ್ದಾವೆ.

Key words: CM Basavaraja Bommai -drives -Lal Bagh -flower show.