ದೆಹಲಿ ಭೇಟಿ ವೇಳೆ ಚರ್ಚಿಸಿದ ವಿಷಯಗಳ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ.

Promotion

ಬೆಂಗಳೂರು,ಆಗಸ್ಟ್,27,2021(www.justkannada.in): ಕಳೆದ ಎರಡು ದಿನಗಳ ಕಾಲ ದೆಹಲಿ ಭೇಟಿ ಕೈಗೊಂಡಿದ್ಧ ಸಿಎಂ ಬಸವರಾಜ ಬೊಮ್ಮಾಯಿ ಹಲವು ಕೇಂದ್ರ ಸಚಿವರನ್ನ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ದೆಹಲಿ ಭೇಟಿ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರ ಬಳಿ ನೀರಾವರಿ ಯೋಜನೆ, ಜಿಎಸ್ ಟಿ, ಕೋವಿಡ್ ಲಸಿಕೆ ಸಂಬಂಧ ಚರ್ಚೆ ನಡೆಸಿದ್ದೇನೆ. ಸೆಪ್ಟಂಬರ್ 1 ರಿಂದ ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಡೋಸ್ ಕೋವಿಡ್ ಲಸಿಕೆ ಹಾಕಲಾಗುತ್ತದೆ. ಹೀಗಾಗಿ ಕೇಂದ್ರ ಆರೋಗ್ಯ ಸಚಿವರನ್ನ ಭೇಟಿಯಾಗಿ ರಾಜ್ಯಕ್ಕೆ ಹೆಚ್ಚಿನ ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಿದ್ದೇನೆ. ನನ್ನ ಮನವಿಗೆ ಅವರು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಇನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಭೇಟಿಯಾಗಿ ಜಿ,ಎಸ್ ಟಿ ಸಂಬಂಧ ಚರ್ಚಿಸಿದ್ದೇನೆ. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದರು ಸಿಎಂ ಬೊಮ್ಮಾಯಿ ತಿಳಿಸಿದರು.

ಇನ್ನು ಮೈಸುರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ತನಿಖೆ ಯಾವ ಹಂತದಲ್ಲಿದೆ ಎಂಬ ಮಾಹಿತಿ ಇಲ್ಲ. ಪೊಲೀಸರಿಂದ ವಿವರ ಪಡೆಯುತ್ತೇನೆ. ಖುದ್ದು ಡಿಜಿಪಿ ಅವರೇ ಇಂದು ಮಸೂರಿಗೆ ಹೋಗಿ ಪರಿಶೀಲನೆ ನಡೆಸಲಿದ್ದಾರೆ ಎಂದರು.

Key words: CM -Basavaraja Bommai– many -issues- discussed -visit – Delhi.