ನೂರಕ್ಕೆ ನೂರರಷ್ಟು ನಾನು ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಇರುತ್ತೇನೆ- ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ಶಾಸಕ

ಬೆಂಗಳೂರು,ಆಗಸ್ಟ್,2,2021(www.justkannada.in):  ಸಚಿವ ಸಂಪುಟ ರಚನೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳಿದ್ದು, ಇನ್ನೆರೆಡು ದಿನಗಳಲ್ಲಿ ಕ್ಯಾಬಿನೆಟ್ ರಚನೆಯಾಗುವ ಲಕ್ಷಣಗಳು ಕಾಣುತ್ತಿವೆ.

ಈ ಮಧ್ಯೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಹಲವು ಶಾಸಕರು ಲಾಬಿ ನಡೆಸುತ್ತಿದ್ದು ಕೆಲವರು ದೆಹಲಿಯಲ್ಲಿ ಬೀಡುಬಿಟ್ಟಿದ್ದರೇ, ಕೆಲವರು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗುವ ಮೂಲಕ ಅಂತಿಮ ಕಸರತ್ತು ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಶಾಸಕ ಅರಗ ಜ್ಞಾನೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದು, ನೂರಕ್ಕೆ ನೂರರಷ್ಟು ನಾನು ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಇರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಬಿಎಸ್ ವೈ ಭೇಟಿ ಬಳಿಕ ಮಾತನಾಡಿರುವ ಅವರು, ಯಡಿಯೂರಪ್ಪರನ್ನು ಭೇಟಿಯಾಗಿದ್ದರಲ್ಲಿ ವಿಶೇಷವೇನಿಲ್ಲ. ಬೆಂಗಳೂರಿಗೆ ಬಂದರೆ ಯಡಿಯೂರಪ್ಪರನ್ನು ಭೇಟಿ ಮಾಡುತ್ತೇನೆ. ಈ ಬಾರಿ ನನ್ನನ್ನು ಸಂಪುಟದಿಂದ ಕೈ ಬಿಡಲು ಸಾಧ್ಯವಿಲ್ಲ.

ಬಿಎಸ್ ವೈಗೆ ನನ್ನ ಮೇಲೆ ಅನುಕಂಪವಿದೆ. ನಾನು ಯಡಿಯೂರಪ್ಪ ಜತೆ ಜೊತೆಯಲ್ಲಿ ಬೆಳೆದವನು. ನಾನು 40 ವರ್ಷ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ನನ್ನನ್ನು ಯಡಿಯೂರಪ್ಪ ಗುರುತಿಸುತ್ತಾರೆ. ಸಂಘ ಸಹ ಗುರುತಿಸುತ್ತದೆ. ಈ ಬಾರಿ ಸಚಿವನಾಗುವ ವಿಶ್ವಾಸವಿದೆ ಎಂದರು.

Key words: CM basavarak Bommai –cabinet-MLA- Araga jnanendra-confidence.