ನಾಡಪ್ರಭು ಕೆಂಪೇಗೌಡ ಮತ್ತು ಬಸವಣ್ಣ ಪುತ್ಥಳಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ ಬೊಮ್ಮಾಯಿ.

Promotion

ಬೆಂಗಳೂರು,ಜನವರಿ,13,2023(www.justkannada.in): ನಾಡಪ್ರಭು ಕೆಂಪೇಗೌಡ ಮತ್ತು ಬಸವಣ್ಣರ ಪುತ್ಥಳಿ ನಿರ್ಮಾಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಶಂಕು ಸ್ಥಾಪನೆ ನೆರವೇರಿಸಿದರು.

ವಿಧಾನಸೌಧದ ಮುಂಭಾಗ ನಾಡಪ್ರಭು ಕೆಂಪೇಗೌಡ ಮತ್ತು ಬಸವಣ್ಣರ ಪುತ್ಥಳಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಶಂಕು ಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಹಾನ್ ನಾಯಕರ ಪುತ್ಥಳಿಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ವಿಧಾನಸೌಧ ಮುಂಭಾಗ ಪುತ್ಥಳಿಗೆ  ಶಂಕು ಸ್ಥಾಪನೆ ನೆರವೇರಿಸಾಗಿದೆ. ಸಂಪುಟದಲ್ಲಿ ಒಪ್ಪಿಗೆ ಪಡೆದು ಪುತ್ಥಳಿ ನಿರ್ಮಾಣ  ಮಾಡಲಾಗುತ್ತಿದೆ. ಮುಂದಿನ 2 ತಿಂಗಳಲ್ಲಿ ಪ್ರತಿಮೆಗಳ ಅನಾವರಣವಾಗಲಿದೆ ಎಂದು ತಿಳಿಸಿದರು.

Key words: CM-Bommai -laid – foundation –stone- Nadaprabhu Kempegowda – Basavanna –statue