ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ: ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್.

Promotion

ನವದೆಹಲಿ,ಮೇ,11,2022(www.justkannada.in):  ಕೇಂದ್ರದ ವರಿಷ್ಠರನ್ನ ಭೇಟಿ ಮಾಡಲು ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಇಂದು ಮಧ್ಯಾಹ್ನ 12.30ಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನ ಸಿಎಂ ಬೊಮ್ಮಾಯಿ ಭೇಟಿಯಾಗಲಿದ್ದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆಯೂ ಪುನರಚನೆಯೋ ಎಂಬ ಬಗ್ಗೆ  ಅಮಿತ್ ಶಾ ಭೇಟಿ ಬಳಿಕ ಸ್ಪಷ್ಟನೆ  ಸಿಗಲಿದ್ದು, ಸಂಪುಟ ವಿಸ್ತರಣೆಗೆ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡುತ್ತಾರೆಯೇ..? ಹೊಸ ಪಟ್ಟಿ ಜೊತೆ ಸಿಎಂ ಬೊಮ್ಮಾಯಿ ಬೆಂಗಳೂರಿಗೆ ವಾಪಸ್ ಆಗುತ್ತಾರಾ ಕಾದು ನೋಡಬೇಕಿದೆ.

ಇನ್ನು ಇಂದು 10.30ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿಯಾಗಲು ಸಿಎಂ ಬೊಮ್ಮಾಯಿ ತೆರಳಿದ್ದು, ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Key words: CM Bommai – meet- Union -Home Minister- Amit Shah,- today.