ಟ್ವಿಟ್ಟರ್ ಮೂಲಕ ಮೋದಿಗೆ ಧನ್ಯವಾದ ಹೇಳಿದ ಸಿಎಂ ಬೊಮ್ಮಾಯಿ

Promotion

ಬೆಂಗಳೂರು, ಡಿಸೆಂಬರ್ 26, 2021 (www.justkannada.in):  ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಅವರು ಟ್ವಿಟ್ಟರ್ ಮೂಲಕ ಧನ್ಯವಾದ ಹೇಳಿದ್ದಾರೆ.

ಜನವರಿ 3 ರಿಂದ ದೇಶಾದ್ಯಂತ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದು, ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಪಿಎಂಗೆ ಧನ್ಯವಾದ ಎಂದಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಜಿಯವರ ಕೋವಿಡ್ ವಿರುದ್ಧದ ಹೋರಾಟವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಮೋದಿ ಅವರ ದೂರದೃಷ್ಟಿ, ಪ್ರಯತ್ನ ಹಾಗೂ ನಿರ್ಣಯಗಳು ಕೋವಿಡ್ ವಿರುದ್ಧದ ಹೋರಾಟವನ್ನು ಯಶಸ್ವಿಗೊಳಿಸುತ್ತದೆ ಎಂಬ ಸಂಪೂರ್ಣವಾದ ನಂಬಿಕೆಯಿದೆ ಎಂದು ಟ್ವೀಟ್ ಮಾಡಿದ್ದಾರೆ.