ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ ಸಿಎಂ ಬಿಎಸ್ ವೈ…

ಬೆಂಗಳೂರು, ಡಿ.19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ,  ಯಾವುದೇ ಕಾರಣಕ್ಕೂ ಶಾಂತಿ ಕದಡಬಾರದು ರಾಜ್ಯದ ಜನರು ಶಾಂತಿ ಕಾಪಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಕಾನೂನು. ಇದರಿಂದ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆ ಆಗಲ್ಲ. ಪೌರತ್ವ ಕಾಯ್ದೆ ಜನರನ್ನು ಅವರ ರಾಷ್ಟ್ರೀಯತೆ ಆಧಾರದ ಮೇಲೆ ಗುರುತಿಸುತ್ತದೆ ವಿನಃ. ಅವರ ಜಾತಿ ಪಂಥ ಧರ್ಮದ ಮೇಲೆ ಅಲ್ಲ. ಇದು ರಾಷ್ಟ್ರೀಯ ಕಾಯ್ದೆ. ದೇಶದ ಎಲ್ಲಾ ರಾಜ್ಯಗಳು, ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದು ಕಾಯ್ದೆ ತಾನಾಗಿಯೇ ಅನ್ವಯವಾಗುತ್ತದೆ  ಎಂದು ಹೇಳಿದರು.

ಹಾಗಯೇ ಕಾನೂನು ಸುವ್ಯವಸ್ಥೆ ಹಾಳುಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ. ಸಾಮಾನ್ಯ ಜನರ ಮೇಲೆ ಯಾವುದೇ ಕ್ರಮ ಕೈಗೊಳ್ಳಬೇಡಿ. ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಬಾರದು. ಯಾವ ಅಧಿಕಾರಿಯೂ ಕಾನೂನು ಕೈಗೆತ್ತಿಕೊಳ್ಳಬಾರದು.  ಲಾಠಿಚಾರ್ಜ್ ಮಾಡಿದ್ರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Key words: CM BS Yeddyurappa-  appealed – people –maintain-peace.