ನಾಳೆ ಸಚಿವ ಸಂಪುಟ ಸಭೆ ಕರೆ ಸಿಎಂ ಬಿ.ಎಸ್.ಯಡಿಯೂರಪ್ಪ

Promotion

ಬೆಂಗಳೂರು, ಆಗಸ್ಟ್ 25, 2019 (www.justkannada.in): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಸಂಜೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರವಾಹ ಪೀಡಿತ ಜಿಲ್ಲೆಗಳು ಹಾಗೂ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ವರದಿ ನೀಡಲು ಸಿಎಂ ಬಿಎಸ್ ವೈ ಸೂಚಿಸಿದ್ದರು. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ಸಚಿವರುಗಳಿಂದ ವರದಿ ಪಡೆಯಲಿದ್ದಾರೆ.

ಸಚಿವರು ನೀಡುವ ಮಾಹಿತಿ ಆಧರಿಸಿ ಅತಿವೃಷ್ಟಿ ಸಂತ್ರಸ್ತರಿಗೆ ತೆಗೆದುಕೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ. ರಾಜ್ಯದಲ್ಲಿ ನೆರೆಹಾನಿ ಬಗ್ಗೆ ಅಧ್ಯಯನ ನಡೆಸುತ್ತಿರುವ ಕೇಂದ್ರ ತಂಡ ವರದಿ ನೀಡಿದ ಬಳಿಕ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೇಳುವ ಬಗ್ಗೆಯೂ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.