ಅನರ್ಹ ಶಾಸಕರ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಿಎಂ ಬಿಎಸ್ ಯಡಿಯೂರಪ್ಪ  ಸಜ್ಜು….

Promotion

ಬೆಂಗಳೂರು,ಅ,29,2019(www.justkannada.in):  ಡಿಸೆಂಬರ್ 5 ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಿನ್ನೆಲೆ ಅನರ್ಹ ಶಾಸರಕ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಸಿಎಂ ಬಿಎಸ್ ಯಡಿಯೂರಪ್ಪ ಸಜ್ಜಾಗಿದ್ದಾರೆ.

ನವೆಂಬರ್ ಪೂರ್ತಿ  ಅನರ್ಹ ಶಾಸಕರ ಕ್ಷೇತ್ರದಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಪ್ರಚಾರ ನಡೆಸಿ ಅನರ್ಹ ಶಾಸಕರ ಪರ ಮತಯಾಚಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನವೆಂಬರ್ 3 ರಂದು ಡಾ.ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ಸಿಎಂ ಬಿಎಸ್ ವೈ ನವೆಂಬರ್ 7 ರಂದು ಬಿ.ಸಿ ಪಾಟೀಲ್ ಕ್ಷೇತ್ರ ಹಿರೆಕೆರೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.

ಹಾಗೆಯೇ  ನವೆಂಬರ್ 10 ರಂದು ಆನಂದ್ ಸಿಂಗ್ ಕ್ಷೇತ್ರ ವಿಜಯನಗರ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡು ಸಿಎಂ ಬಿಎಸ್ ಯಡಿಯೂರಪ್ಪ ಮತಯಾಚಿಸಲಿದ್ದಾರೆ.

ಒಂದೆಡೆ  ತಮ್ಮನ್ನ ಅನರ್ಹಗೊಳಿಸಿ ಹಿಂದಿನ ಸ್ಪೀಕರ್ ನೀಡಿದ್ದ ಆದೇಶ ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್ ಗೆ  ಸಲ್ಲಿಸಿರುವ  ಅರ್ಜಿ ವಿಚಾರಣೆ ಮುಗಿದಿದ್ದು ತೀರ್ಪು ಪ್ರಕಟವಾಗುವುದು ಬಾಕಿ ಇದೆ.  ಇತ್ತ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಫೈನಲ್ ಆಗೋದು, ಸುಪ್ರೀಂ ಕೋರ್ಟ್ ನ ತೀರ್ಪಿನ ನಂತ್ರ ಎಂದು ಹೇಳಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉಪ ಚುನಾವಣೆಗೆ ಚುನಾವಣಾ ಪ್ರಚಾರ ಕೈಗೊಳ್ಳಲು ದಿನಾಂಕ ನಿಗಧಿ ಮಾಡಿದ್ದಾರೆ.

Key words: CM BS Yeddyurappa – campaign –disqualified MLA- constituency