ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ತರಾಟೆ: ಜಿಲ್ಲಾಪ್ರವಾಸ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ….

ಬೆಂಗಳೂರು, ಆ.2,2019(www.justkannada.in): ಅಧಿಕಾರಿಗಳು ಸರಿಯಾದ ಸಮಯಕ್ಕೆ ಬರಬೇಕು ಜನ ಸಾಮಾನ್ಯರ ಸಮಸ್ಯೆಯನ್ನ ಸ್ಥಳದಲ್ಲೇ ಪರಿಹರಿಸುವಂತೆ ಅಧಿಕಾರಿಗಳಿಗೆ  ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳ ಜತೆ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ಕೆಲವು ಖಡಕ್ ಸೂಚನೆ ನೀಡಿದ ಅವರು, ಸಾರ್ವಜನಿಕರ ಕೆಲಸಗಳು ಸುಗಮವಾಗಿ ಆಗಬೇಕು.  ಜನರ ಸಮಸ್ಯೆ ಪರಿಹಾರ ಮಾಡಲು ತುರ್ತು ಕ್ರಮ ಅನುಸರಿಸಬೇಕು. ಅನಗತ್ಯ ವಿಳಂಬ, ಕಚೇರಿಗಳ ಸುತ್ತಾಟ ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು.

ನಿತ್ಯ ಎಲ್ಲರು ಬೆಳಗ್ಗೆ 10 ಗಂಟೆಗೆ ಕಚೇರಿಗೆ ಬರುವುದು ಕಡ್ಡಾಯ, ಹಾಗೂ ಅವತ್ತಿನ ಕಡತಗಳನ್ನು ಅವತ್ತೇ ಮುಗಿಸಬೇಕು. ಎರಡು ಮೂರು ದಿನಗಳಲ್ಲಿ ಕಡತಗಳನ್ನ ಮೂವ್ ಮಾಡಬೇಕು. ಜಿಲ್ಲಾಮಟ್ಟದಲ್ಲಿ ಆಡಳಿತ ಯಂತ್ರ ಚುರುಕುಗೊಳಿಸಬೇಕುಎ ಎಂದು ಸೂಚಿಸಿದರು.

ಪ್ರತಿ ತಿಂಗಳು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುವಂತೆ ಮುಖ್ಯ ಕಾರ್ಯದಶಿ ಭೇಟಿ ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಯಲ್ಲಿ ಎರಡು ಬಾರಿ ಪ್ರವಾಸ ಮಾಡಬೇಕು, ನಾನು ಪ್ರತಿ ತಿಂಗಳು ಯಾರು ಎಲ್ಲಿ ಹೋಗಿದ್ದೀರಿ ಎನ್ನುವ ಮಾಹಿತಿ ತರಿಸಿಕೊಳ್ಳುತ್ತೇನೆ, ಈ ಬಗ್ಗೆ ವರದಿ ಪಡೆಯುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: CM BS Yeddyurappa –class- officer-meeting-vidhansoudha