ಕಾನೂನು ಸುವ್ಯವಸ್ಥೆ ಕಾಪಾಡಲು ಸೂಚನೆ :ಬೆಂಗಳೂರಿನಲ್ಲಿನ ಭದ್ರತೆ ಬಗ್ಗೆ ಹಿರಿಯ ಪೊಲೀಸ್ ಆಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಡಿ,23,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆಗೆ ಪರ ಮತ್ತು ವಿರೋಧವಾಗಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಬೆಂಗಳೂರಿನಲ್ಲಿ ಕೈಗೊಂಡಿರುವ ಭದ್ರತೆ ಬಗ್ಗೆ ಮಾಹಿತಿ ಪಡೆದರು.

ಬೆಂಗಳೂರಿನ ಟೌನ್ ಹಾಲ್ ಬಳಿ ಸಿಎಎ ವಿರೋಧಿಸಿ ಮತ್ತು ಪರವಾಗಿ ಪ್ರತಿಭಟನೆ ನಡೆದಿತ್ತು.  ಬೆಂಗಳೂರಿನಲ್ಲಿ ವಿವಿಧ ಕಡೆಗಳಲ್ಲಿ ಪ್ರತಿಭಟನೆ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಡಿಜಿ ಐಜಿಪಿ ನೀಲಮಣಿ ರಾಜು ಅವರ ಬಳಿ ಭದ್ರತೆ ಬಗ್ಗೆ ಮಾಹಿತಿ ಪಡೆದರು.

ನಿನ್ನೆ ರಾತ್ರಿ ಖುದ್ದು ಡಿಜಿ ಐಜಿಪಿ  ನೀಲಮಣಿ ರಾಜು ಅವರು ಮಾಹಿತಿ ನೀಡಿದ್ದು. ಈ ವೇಳೆ ಮಂಗಳೂರಿನಲ್ಲಿ ನಡೆದ ಘಟನೆ ಬೆಂಗಳೂರಿನಲ್ಲಿ ನಡೆಯಬಾರದು ಇದಕ್ಕೆ ಮುಂಜಾಗ್ರತೆ ವಹಿಸಿ ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ,

ಇನ್ನು ಸಿಎಎ ಪರ ಮತ್ತು ವಿರೋಧ ಪ್ರತಿಭಟನೆ ಹಿನ್ನೆಲೆ ಟೌನ್ ಹಾಲ್ ಬಳಿ 1 ಸಿಎಆರ್ ತುಕಡಿ ಮತ್ತು 50ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಟೌನ್ ಹಾಲ್ ಹಾಲ್ ಬಳಿ ಯಾವುದೇ ಪ್ರತಿಭಟನೆ ನಡೆಯದಂತೆ ಸೂಚಿಸಲಾಗಿದೆ.

Key words: CM BS Yeddyurappa – information -senior police officers- security -Bangalore.