ನಾಡಪ್ರಭು ಕೆಂಪೇಗೌಡರ ಜಯಂತಿ ಶುಭಾಶಯ ತಿಳಿಸಿದ ಸಿಎಂ ಬಿಎಸ್ ವೈ.

Promotion

ಬೆಂಗಳೂರು,ಜೂನ್. 27,2021(www.justkannada.in): ಇಂದು ನಾಡಪ್ರಭು ಕೆಂಪೇಗೌಡರ 512 ಜಯಂತಿ ಹಿನ್ನೆಲೆಯಲ್ಲಿ  ರಾಜ್ಯದ ಜನತೆಗೆ ಮುಖ್ಯಮಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಪೇಗೌಡರ ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿಯ ಹಾರ್ದಿಕ ಶುಭಾಶಯಗಳು. ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ, ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ, ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ, ಆ ಧೀಮಂತ ಆಡಳಿತಗಾರನಿಗೆ ಅನಂತ ಪ್ರಣಾಮಗಳನ್ನು ಸಲ್ಲಿಸೋಣ ಎಂದು ನುಡಿದಿದ್ದಾರೆ.

Key words: CM BS yeddyurappa- Nadaprabhu -Kempegowda Jayanti-wishes