ಕೊರೋನಾ ವೈರಸ್ ಬಗ್ಗೆ ರಾಜ್ಯದ ಜನರಲ್ಲಿ ಆತಂಕ ಬೇಡ- ಸಿಎಂ ಬಿಎಸ್ ಯಡಿಯೂರಪ್ಪ….

Promotion

ಬೆಂಗಳೂರು,ಮಾ,4,2020(www.justkannada.in):  ಕೊರೋನಾ ವೈರಸ್ ಭೀತಿ ಹಿನ್ನೆಲೆ ಈ ಬಗ್ಗೆ ರಾಜ್ಯದ ಜನರಲ್ಲಿ ಯಾವುದೇ ಆತಂಕ ಬೇಡ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಧೈರ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಯಾವುದೇ ರೀತಿ ಕೊರೋನಾ ಸೋಂಕು ಇಲ್ಲ. ರಾಜ್ಯದಲ್ಲಿ ಇದುವರೆಗೆ ಯಾವುದೇ ಸೋಂಕು ಪತ್ತೆಯಾಗಿಲ್ಲ  ಆರೋಗ್ಯ ಸಚಿವರು ಈಗಾಗಲೇ ಈ ಕುರಿತು ಮಾತನಾಡಿದ್ದಾರೆ. ಮುಂಜಾಗ್ರತ ಕ್ರಮ ಕೈಗೊಳ್ಳಲು ಸಚಿವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕೊರೋನಾ ಸೋಂಕಿತರ ಪತ್ತೆಗೆ ಏರ್ ಪೋರ್ಟ್ ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಜನರಲ್ಲಿ ಈ ಬಗ್ಗೆ ಯಾವುದೇ ಆತಂಕಬೇಡ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words:  CM BS Yeddyurappa- People –state- not worry- about- coronavirus.