ಚುನಾವಣಾ ಪ್ರಚಾರದ ವೇಳೆ ಮಹಾರಾಷ್ಟ್ರಕ್ಕೆ ನೀರು ಹರಿಸುವುದಾಗಿ ಭರವಸೆ ಕೊಟ್ಟ ಸಿಎಂ ಬಿಎಸ್ ಯಡಿಯೂರಪ್ಪ..

Promotion

ಬೆಂಗಳೂರು,ಅ,17,2019(www.justkannada.in):  ಅ.21 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ತಮ್ಮ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳಿದ್ದ ರಾಜ್ಯದ ಸಿಎಂ ಬಿಎಸ್ ಯಡಿಯೂರಪ್ಪ ಮಹಾರಾಷ್ಟ್ರಕ್ಕೆ  ನೀರುಹರಿಸುವುದಾಗಿ ಭರವಸೆ ನೀಡಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸತ್ ಗ್ರಾಮದಲ್ಲಿ  ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದ ತುಬಚಿ, ಬಬಲೇಶ್ವರ ಏತ ನೀರಾವರಿ ಯೋಜನೆಯಿಂದ ಮಹಾರಾಷ್ಟ್ರಕ್ಕೆ ನೀರು ಹರಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಅಲಮಟ್ಟಿಯಿಂದ ಮಹಾರಾಷ್ಟ್ರಕ್ಕೆ ನೀರು ಹರಿಸುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ನೀಡಿರುವ ಭರವಸೆಗೆ ರಾಜ್ಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ರಾಜ್ಯದ ಮಹಾದಾಯಿ ವಿವಾದ ಬಗೆಹರಿಸದ ಅವರು ಮಹಾರಾಷ್ಟ್ರಕ್ಕೆ ನೀರು ಹರಿಸುವುದಾಗಿ ಭರವಸೆ ನೀಡಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

Key words: CM BS Yeddyurappa- promised – bring -water – Maharashtra – election campaign.