ಹುಣಸೋಡು ಬಳಿ ಸ್ಪೋಟ ದುರಂತ ಸ್ಥಳಕ್ಕೆ ಸಿಎಂ ಬಿಎಸ್ ವೈ ಭೇಟಿ ಪರಿಶೀಲನೆ: ಘಟನೆ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ…

ಶಿವಮೊಗ್ಗ,ಜನವರಿ,23,2021(www.justkannada.in):  ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ಸ್ಥಳಕ್ಕೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.jk

ಶಿವಮೊಗ್ಗದಿಂದ ನೇರವಾಗಿ ಘಟನಾ ಸ್ಥಳಕ್ಕೆ ತೆರಳಿದ ಸಿಎಂ ಬಿಎಸ್ ಯಡಿಯೂರಪ್ಪ ಘಟನಾ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಸಿಎಂ ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಮತ್ತು ಅಧಿಕಾರಿಗಳು ಸಾಥ್ ನೀಡಿದರು.

ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಗಣಿದುರಂತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಪ್ರಾಥಮಿಕವಾಗಿ ಹೈದರಾಬಾದ್ ತಂಡ  ತನಿಖೆ ನಡೆಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಇಲ್ಲಿನ ಎಲ್ಲಾ ಕ್ರಷರ್ ಗಳಿಗೆ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಆದರೆ ಕಲ್ಲುಗಣಿಗಾರಿಕೆಗೆ ಯಾವುದೇ ಅನುಮತಿ ನೀಡಿಲ್ಲ ಎಂದರು.cm-bs-yeddyurappa-visits-inspection-hunasodu-blast-shivamogga

ಘಟನೆಗೆ ಸಂಬಂಧಿಸಿದ ಆರೋಪಿಗಳು ಯಾರೇ ಆದರೂ ಸರಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: CM BS yeddyurappa- visits- inspection – hunasodu-blast-shivamogga