ಸಿಎಂ ಬದಲಾವಣೆ ವಿಚಾರ: ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ಪ್ರತಿಕ್ರಿಯಿಸಿದ್ದು ಹೀಗೆ…

Promotion

ಬೆಂಗಳೂರು,ಜುಲೈ,21,2021(www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು, ನನ್ನ ಪ್ರಕಾರ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಡಿ.ವಿ ಸದಾನಂದಗೌಡರು,  ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಮತ್ತು ಕೊರೋನಾ ನಿರ್ವಹಣೆ ಕುರಿತು ಬಿಜೆಪಿ ಹೈಕಮಾಂಡ್ ಸಂತಸಗೊಂಡಿದ್ದಾರೆ. ಹೀಗಾಗಿ  ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಬದಲಾವಣೆ ಸಾಧ್ಯತೆ ಇಲ್ಲ. ಉಳಿದದ್ದು ರಾಷ್ಟ್ರೀಯ ನಾಯಕರಿಗೆ ಬಿಟ್ಟದ್ದು. ಕೋವಿಡ್ ನಿರ್ವಹಣೆ ಮತ್ತು ಅಭಿವೃದ್ಧಿ ಕೆಲಸಗಳ ಬಗ್ಗೆ ಪ್ರಧಾನಿ  ಮೋದಿ ಅವರೇ ಬಿಎಸ್ ವೈ  ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆ ಇಲ್ಲ ಎಂದರು.

Key words: CM Change- Issue-Former Union Minister -DV Sadananda Gowda -reaction