ಸಿಎಂ ಬದಲಾವಣೆ ಪ್ರಸ್ತಾಪ ವಿಚಾರ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು ಹೀಗೆ.

Promotion

ಬೆಂಗಳೂರು,ಜೂನ್,16,2021(www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಎರಡು ವರ್ಷ ಬಿಎಸ್ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಬಿಜಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ  ನಳೀನ್ ಕುಮಾರ್ ಕಟೀಲ್, ಇಂದು ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ. ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಇರಲಿದ್ದಾರೆ.  ಅವರ ಜತೆ ಮಾತನಾಡಲು ಬಯಸುವವರು ಮಾತನಾಡಬಹುದು ಎಂದರು.

ಸಿಎಂ ಬದಲಾವಣೆ ಪ್ರಸ್ತಾಪ ಕುರಿತು ಪ್ರತಿಕ್ರಿಯಿಸಿದ ನಳೀನ್ ಕುಮಾರ್ ಕಟೀಲ್, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ನಾಯಕತ್ವ ಬದಲಾವಣೆಯ ಚರ್ಚೆಯೇ ನಡೆದಿಲ್ಲ.   ಬಿಎಸ್ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ತಿಳಿಸಿದರು.

Key words: CM- change- proposal –issue-BJP- president- Nalin Kumar Katil