ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ…

Promotion

ಬೆಂಗಳೂರು, ಮೇ,2,2019(www.justkannada.in):  ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿಯುವಂತವು.  ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯ ವಾಗಿತ್ತು ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಮರಿಸಿಕೊಂಡಿದ್ದಾರೆ. ಅವರ ನಿಧನದಿಂದ ರಂಗಭೂಮಿ ಒಂದು ಅಪೂರ್ವ ರತ್ನವನ್ನು ಕಳೆದುಕೊಂಡಂತಾಗಿದೆ ಎಂದು ಬಣ್ಣಿಸಿದ್ದಾರೆ.

ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಅವರ ಕುಟುಂಬ ಅಪಾರ ಅಭಿಮಾನಿ ಬಳಗಕ್ಕೆ ಅವರ ಅಗಳಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಸಿಎಂ ಹೆಚ್.ಡಿಕೆ ಪ್ರಾರ್ಥಿಸಿದ್ದಾರೆ.

Key words: CM HD Kumaraswamy- condolences – senior journalist -Master Hirannaya- death.