ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ನವದೆಹಲಿ,ಜೂ,15,2019(www.justkannada.in):  ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ  ದೇಶದ ಪ್ರಧಾನಿಯಾಗಿ ಮರುಆಯ್ಕೆಯಾಗಿದ್ದಕ್ಕೆ ಶುಭ ಕೋರಿದರು.

ನವದೆಹಲಿಯ  ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಹೆಚ್,ಡಿ ಕುಮಾರಸ್ವಾಮಿ  ಮೋದಿ ಅವರ ಜತೆ ಚರ್ಚೆ ನಡೆಸಿದರು. ಈ ವೇಳೆ  ರಾಜ್ಯಕ್ಕೆ ಬರಬೇಕಾದ ಮನೇಗ್ರಾ ಯೋಜನೆಯ ಅನುದಾನವನ್ನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ ಹಾಗೂ ಸಾಲ ಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಚರ್ಚಿಸಿದರು.

ರಾಜ್ಯದಲ್ಲಿ ಈ ವರ್ಷವೂ ಬರದ ಛಾಯೆ ಇದ್ದು ಶೇ. 45 ರಷ್ಟು ಮಳೆ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂಂದ್ರ ಸರ್ಕಾರ ರಾಜ್ಯದ ನೆರವಿಗೆ ಮುಂದಾಗಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಮಹಾತ್ಮಾ ಗಾಂಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರಾಜ್ಯ ಸರ್ಕಾರ ಕೂಲಿಯ ಬಾಬ್ತು ಪಾವತಿಸಿದ 1200 ಕೋಟಿ ರೂ. ಮುಂಗಡ ಹಣವೂ ಸೇರಿದಂತೆ ಸುಮಾರು 1500 ಕೋಟಿ ರೂ. ಅನುದಾನ ಬಾಕಿ ಇದೆ. ಇದನನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ವಹಿಸುವಂತೆ ಕೋರಿದರು.
ರಾಜ್ಯದಲ್ಲಿ ಸಾಲ ಮನ್ನಾ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ, ಪಾರದರ್ಶಕವಾಗಿ ಅನುಷ್ಠಾನಗೊಳಿಸಲಾಗಿದೆ. ರಾಜ್ಯದ ವಾಣಿಜ್ಯ

ಬ್ಯಾಂಕುಗಳ 9 ಲಕ್ಷ ಹಾಗೂ ಸಹಕಾರಿ ಬ್ಯಾಂಕುಗಳ 14 ಲಕ್ಷ ಫಲಾನುಭವಿಗಳ ಒಟ್ಟು 12830 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ ಮಾಡಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳು ವಿವರಿಸಿದರು.

Key words: CM HD Kumaraswamy  meets Prime Minister Narendra Modi.

#CMHDKumaraswamy #meets #PrimeMinister #Narendra Modi.