ಸಾಲು ಮರದ ತಿಮ್ಮಕ್ಕ ಅವರ ಮನವಿಗೆ ಸ್ಪಂದಿಸಿದ ಸಿ.ಎಂ ಹೆಚ್.ಡಿ.ಕೆ: ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು, ಜೂನ್,03,2019(www.justkannada.in):  ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದರು.

ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ  ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಗಡಿ  ತಾಲ್ಲೂಕಿನ ಕುದೂರು ಗ್ರಾಮದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿಯಲು ಮುಂದಾಗಿರುವ ಬಗ್ಗೆ  ಸಾಲಮರದ ತಿಮ್ಮಕ್ಕ ಅವರು ಮುಖ್ಯಮಂತ್ರಿ ಹೆಚ್,ಡಿ ಕುಮಾರಸ್ವಾಮಿ  ಗಮನಕ್ಕೆ ತಂದರು.

ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ರಸ್ತೆಯ ಮಾರ್ಗವನ್ನು ಬದಲಿಸುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಗ್ರಾಮದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಿದರು.

Key words: CM HD Kumaraswamy responded to the appeal of  salumarada Thimmakka-  Instructed to officers not to cut road side trees.

#CMHDKumaraswamy #responded #salumaradaThimmakka #tree