ತವರು ಕ್ಷೇತ್ರದಲ್ಲೇ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಶಾಕ್: ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುಖಂಡ…

Promotion

ರಾಮನಗರ,ಜು,4,2019(www.justkannada.in):  ತವರು ಕ್ಷೇತ್ರದಲ್ಲೇ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಶಾಕ್ ನೀಡಿದ್ದು, ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಪಿ. ಅಶೋಕ್‌ ಕುಮಾರ್‌  ರಾಜೀನಾಮೆ ನೀಡಿದ್ದಾರೆ.

ಅಶೋಕ್ ಕುಮಾರ್ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಶಾಸಕಿ ಅನಿತಾಕುಮಾರಸ್ವಾಮಿ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ.

ತಮ್ಮ ರಾಜೀನಾಮೆ ಪತ್ರದಲ್ಲಿ ಅಶೋಕ್‌ ಕುಮಾರ್‌ ಅವರು ಕಳೆದ 3 ವರ್ಷಗಳಿಂದ ಜೆಡಿಎಸ್‌ ಪಕ್ಷದ ಜಿಲ್ಲಾಧ್ಯಕ್ಷ ನಾಗಿದ್ದೇನೆ. ವೈಯಕ್ತಿಕ ಕಾರಣಗಳಿಂದಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಈ ಕೂಡಲೇ ಇದನ್ನು ಅಂಗೀಕರಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ತವರು ಕ್ಷೇತ್ರದಲ್ಲೇ ರಾಜೀನಾಮೆ ಬಿಸಿ ತಟ್ಟಿದೆ.

Keywords: CM HD Kumaraswamy – Shock – home constituency- JDS- district president- resigns