ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ.

Promotion

ಬೆಂಗಳೂರು,ಮಾರ್ಚ್,31,2022(www.justkannada.in): ಇತ್ತೀಚೆಗೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಸಿಎಂ ಇಬ್ರಾಹಿಂ ಇಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದ ಸಿಎಂ ಇಬ್ರಾಹಿಂ, ರಾಜೀನಾಮೆ ಸಲ್ಲಿಸಿದರು. ಪರಿಷತ್ ಸ್ಥಾನಕ್ಕೆ ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದರು.

JDS- join- issue-CM Ibrahim- clarified.
ಕೃಪೆ-internet

ಪರಿಷತ್ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಬೇಸರಗೊಂಡು ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದರು. ನಂತರ ಕಾಂಗ್ರೆಸ್ ನಾಯಕರು ಮನವೊಲಿಸಲು ಮುಂದಾಗಿ ವಿಫಲರಾಗಿದ್ದರು. ಇನ್ನು ಸಿಎಂ ಇಬ್ರಾಹಿಂ ಜೆಡಿಎಸ್ ಸೇರಲಿದ್ದು,  ಈ ಸಂಬಂಧ ಜೆಡಿಎಸ್ ನಾಯಕರಾದ ಎಚ್​.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರನ್ನೂ ಸಂಪರ್ಕಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಹೆಚ್.ಡಿ ಕುಮಾರಸ್ವಾಮಿ ಸಿಎಂ ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದರು.

Key words:  CM Ibrahim- resigned –MLC-position