ಸಿಎಂ ಕಚೇರಿ ಸಿಬ್ಬಂದಿಗೆ ಇನ್ಮುಂದೆ ಪ್ರತಿ 15 ದಿನಕ್ಕೊಮ್ಮೆ ಕೋವಿಡ್ ಟೆಸ್ಟ್…

ಬೆಂಗಳೂರು,ಜೂ,23,2020(www.justkannada.in):  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಡುವೆ ಸಿಎಂ ಕಚೇರಿಯ ಎಲ್ಲಾ ಸಿಬ್ಬಂದಿಗಳಿಗೆ ಪ್ರತಿ 15 ದಿನಗಳಿಗೊಮ್ಮೆ ಕೋವಿಡ್ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ.

ಸಿಎಂ ಕಚೇರಿ ಹಾಗೂ ಗೃಹ ಕಚೇರಿಗಳಲ್ಲಿ ಕೊರೊನಾ ಸೋಂಕಿನ ಭೀತಿ ಕಳೆದ ಕೆಲ ದಿನಗಳಿಂದ ಎದುರಾಗಿದೆ. ಇತ್ತೀಚೆಗೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೆಲಸ ನಿರ್ವಹಿಸುತ್ತಿದ್ದ  ಸಿಬ್ಬಂದಿಯ ಪತಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.  ಈ ಹಿನ್ನೆಲೆಯಲ್ಲಿ ಆತಂಕ ಮನೆಮಾಡಿತ್ತು. ಅಲ್ಲದೇ, ಸಿಎಂ ಅವರ ಅಂದಿನ ಕಾರ್ಯಕ್ರಮಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿತ್ತು.cm-office-staff-covid-test-every-15-days

ಬಳಿಕ ಸಿಬ್ಬಂದಿಗೆ ಕೊರೋನಾ ಟೆಸ್ಟ್ ಮಾಡಿದಾಗ ಸಿಬ್ಬಂದಿಗೆ ವರದಿ ನೆಗೆಟಿವ್ ಬಂದಿತ್ತು. ಹೀಗಾಗಿ ಕಚೇರಿಯ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದರು. ಇನ್ನು ಬೆಂಗಳೂರಿನಲ್ಲಿ  ದಿನೇ ದಿನೇ ಸೋಂಕಿತರ ಸಂಖ್ಯೆ  ಹೆಚ್ಚುತ್ತಿದ್ದು ಈ ಹಿನ್ನೆಲೆ ಸಿಎಂ ಗೃಹಕಚೇರಿ ಕೃಷ್ಣ, ಕಾವೇರಿ ನಿವಾಸಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲ ಸಿಬ್ಬಂದಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ಕೋವಿಡ್ ಟೆಸ್ಟ್ ಮಾಡಿಸಲು ಸೂಚನೆ ನೀಡಲಾಗಿದೆ.

Key words: CM office –staff- Covid test -every -15 days