ಇಬ್ಬರು ಶಾಸಕರನ್ನ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ…

Promotion

ಬೆಂಗಳೂರು, ಜು,11,2019(www.justkannada.in):  ಶಾಸಕ ಸ್ಥಾನಕ್ಕೆರಾಜೀನಾಮೆ ನೀಡಿರುವ ಇಬ್ಬರು  ಶಾಸಕರನ್ನ ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕಮಟಳ್ಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಸಿದ್ದರಾಮಯ್ಯ ಸ್ಪೀಕರ್‌ ರಮೇಶ್ ಕುಮಾರ್ ಗೆ ಮನವಿ ಸಲ್ಲಿಸಲಿದ್ದಾರೆ.  ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಮೇಶ್ ಜಾರಕಿಹೊಳಿ ಅಂದಿನಿಂದಲೂ ಕಾಂಗ್ರೆಸ್ ನಾಯಕರ ವಿರುದ್ದ ಶೀತಲ ಸಮರ ನಡೆಸುತ್ತಿದ್ದರು. ಜತೆಗೆ ಬಿಜೆಪಿಗೆ ಹೋಗುವ ಬೆದರಿಕೆಯನ್ನೂ ಹಾಕಿದ್ದರು.

ಈ ನಡುವೆ ಕಳೆದ ಶನಿವಾರ ಅತೃಪ್ತ ಶಾಸಕರ ಜತೆ ಸೇರಿ ರಮೇಶ್ ಜಾರಕಿಹೊಳಿ ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಗೆ ತೆರಳಿದ್ದಾರೆ. ಇನ್ನು ಅಥಣಿ ಶಾಸಕ ಮಹೇಶ್ ಕುಮುಟಳ್ಳಿ ನಾನು ಕಾಂಗ್ರೆಸ್ ತೊರೆಯಲ್ಲ ಎಂದು ಹೇಳಿ ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

Key words: CM Siddaramaiah -appealed – Speaker -disqualify -two MLAs.