ನಾಳೆ ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ: ಕಾರ್ಯಕ್ರಮಗಳ ಪಟ್ಟಿ ಹೀಗಿದೆ..

Promotion

ಬೆಂಗಳೂರು,ಜೂನ್,9,2023(www.justkannada.in): ಮುಖ್ಯಮಂತ್ರಿ ಸಿದ‍್ಧರಾಮಯ್ಯ ಅವರು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜೂನ್ 10 ರಂದು(ನಾಳೆ)   ಮಧ್ಯಾಹ್ನ  12.20 ಕ್ಕೆ ಸುತ್ತೂರಿನ ಜೆಎಸ್ಎಸ್ ವಸತಿ ಶಾಲಾ ಮೈದಾನದ ಹೆಲಿಪ್ಯಾಡ್ ಗೆ ಬಂದಿಳಿಯಲಿರುವ ಸಿಎಂ ಸಿದ್ಧರಾಮಯ್ಯ 12:35ಕ್ಕೆ ಬಿಳಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿರುವ ಕೃತಜ್ಞತಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2:45 ಕ್ಕೆ ಸುತ್ತೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಸಂಜೆ 4 ಗಂಟೆಗೆ ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸುವರು.

ಜೂನ್ 11ರಂದು ಬೆಳಗ್ಗೆ 9:30ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ವಾಪಸ್ ತೆರಳಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಜನರು ತಮ್ಮನ್ನ ಗೆಲ್ಲಿಸಿದ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು  ನಾಳೆ ಬಿಳಿಗೆರೆ ಗ್ರಾಮದಲ್ಲಿ ಸಮಾವೇಶ ಹಮ್ಮಿಕೊಂಡಿದ್ದಾರೆ

Key words: CM Siddaramaiah- Mysore- District -Tour -Tomorrow