ಕೋವಿಡ್ ನಿರ್ವಹಣೆಯಲ್ಲಿ ಸಿಎಂ ಪಾತ್ರ ದೊಡ್ಡದು; 15 ಲಕ್ಷ ರೈತರಿಗೆ 10 ಲಕ್ಷ ರೂ. ಸಾಲ ವಿತರಣೆ- ಸಚಿವ ಎಸ್.ಟಿ. ಸೋಮಶೇಖರ್..

Promotion

ಬೆಂಗಳೂರು,ನವೆಂಬರ್,14,2020(www.justkannada.in) ಕೋವಿಡ್ 19 ಬಂದ ಸನ್ನಿವೇಶದಲ್ಲಿ ಕೇಂದ್ರ ಸರ್ಕಾರ ನೀಡಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ರಾಜ್ಯದಲ್ಲಿ ಆರೋಗ್ಯದ ದೃಷ್ಟಿಯಿಂದ ಬೇಕಾದ ಕ್ರಮಗಳನ್ನು ತೆಗೆದುಕೊಂಡು ಕೊರೋನಾ ನಿಯಂತ್ರಣ ಮಾಡುವಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಸಹಕಾರ ಇಲಾಖೆ ಮೂಲಕ ಬಡವರ ಬಂಧು ಮೂಲಕ ಸಾಲ ವಿತರಣೆಯನ್ನು ಸಮರ್ಪಕವಾಗಿ ಜಾರಿ ಮಾಡಲಾಗಿತ್ತಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ಸಹ ಶೂನ್ಯ ಬಡ್ಡಿದರದಲ್ಲಿ ಸಾಲಗಳನ್ನು ವಿತರಣೆ ಮಾಡಿದ್ದೇವೆ ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಆರ್ಥಿಕ ಪ್ಯಾಕೇಜ್ ಮೂಲಕ ಬಲ

ಕೋವಿಡ್ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಚಟುವಟಿಕೆ ಸಂಪೂರ್ಣ ಕುಂಠಿತಗೊಂಡಿತ್ತು. ಹೀಗಾಗಿ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಅನ್ನು ಘೋಷಣೆ ಮಾಡಿತು. ಅದರಲ್ಲಿ ರಾಜ್ಯದ ಪಾಲಾದ 4525 ಕೋಟಿ ರೂಪಾಯಿಗಳು ಬಂದಿದ್ದು, ಇದರ ಮೂಲಕ ವಿವಿಧ ಕ್ಷೇತ್ರಗಳಿಗೆ ಸಾಲವನ್ನು ಸಹಕಾರ ಇಲಾಖೆ ಮೂಲಕ ವಿತರಣೆ ಮಾಡಲಾಗುತ್ತಿದೆ. ಅಲ್ಲದೆ, ಮೀನುಗಾರರು ಹಾಗೂ ಹೈನುಗಾರಿಕೆಗೆ ಶೂನ್ಯ ಬಡ್ಡಿದರದಿಂದ ಶೇ. 3ರ ಬಡ್ಡಿದರದಲ್ಲಿ ಮೂರು ಲಕ್ಷ ರೂಪಾಯಿವರೆಗೂ ಸಾಲ ನೀಡಲಾಗುತ್ತಿದೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಆರ್ಥಿಕ ಸ್ಪಂದನಕ್ಕೆ ಯಶಸ್ವಿ ಚಾಲನೆ

ಆತ್ಮನಿರ್ಭರ ಯೋಜನೆಯಡಿ ರಾಜ್ಯ ಸರ್ಕಾರ ಹಾಗೂ ಸಹಕಾರ ಇಲಾಖೆ ನೇತೃತ್ವದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಇತ್ತೀಚೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇದರ ಮೂಲಕ 39,600 ಕೋಟಿ ರೂಪಾಯಿ ಸಾಲ ವಿತರಣೆ ಗುರಿಯನ್ನು ಹಾಕಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು 4 ಕಂದಾಯ ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳ ಮೂಲಕ ಈಗಾಗಲೇ ಸಹಾಯಧನ ವಿತರಣೆ ಮಾಡಲು ಚಾಲನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಯ ದುರ್ಬಳಕೆಯಾಗಬಾರದು ಎಂಬ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.cms-role-covids-management-huge-minister-s-t-somashekhar

15 ಲಕ್ಷ ರೈತರಿಗೆ 10 ಲಕ್ಷ ರೂ. ಸಾಲ ವಿತರಣೆ

ಕೋವಿಡ್ ಸಂದರ್ಭ ಎದುರಾದ ಹಿನ್ನೆಲೆಯಲ್ಲಿ ರೈತರಿಗೆ ಪ್ರಸಕ್ತ ಸಾಲಿನಲ್ಲಿ ಸಾಲ ನೀಡುವುದು ಬಹಳ ಕಷ್ಟ ಎಂದೇ ಅಂದಾಜಿಸಲಾಗಿತ್ತು. ಕಳೆದ ವರ್ಷ ನೀಡಲಾಗಿದ್ದ 13500 ಕೋಟಿಯಷ್ಟು ಸಾಲವನ್ನೂ ಸಹ ನೀಡಲು ಕಷ್ಟವಾಗಬಹುದು ಎಂಬ ಆತಂಕದ ನಡುವೆಯೂ ನಾವು 24 ಲಕ್ಷ ರೈತರಿಗೆ 14,500 ಕೋಟಿ ರೂಪಾಯಿ ಸಾಲ ವಿತರಣೆ ಗುರಿ ಹಾಕಿಕೊಂಡೆವು. ಅದರನ್ವಯ ಈವರೆಗೆ ಅಂದರೆ ನವೆಂಬರ್ 14ರ ವರೆಗೆ 15,22,076 ರೈತರಿಗೆ 9945.82 ಕೋಟಿ ರೂಪಾಯಿ ಸಾಲವನ್ನು ನೀಡಿದ್ದೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಸಹಕಾರ ರತ್ನ ಪ್ರಶಸ್ತಿಯನ್ನು ನಮಗೆ ಕೊಡಿ ಎಂದು ಯಾರೂ ಸಹ ನನಗಾಗಲೀ, ಮುಖ್ಯಮಂತ್ರಿಗಳಿಗಾಗಲೀ ಅರ್ಜಿಯನ್ನು ಹಾಕಿಲ್ಲ. ಆದರೆ, ನಾನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿದಂಥ ಸಂದರ್ಭದಲ್ಲಿ ಸಹಕಾರ ಕ್ಷೇತ್ರಕ್ಕಾಗಿ ದುಡಿಯುತ್ತಿರುವವರನ್ನು ಗುರುತಿಸಿದ್ದೇನೆ. ಈಗ ಅವರಿಗೆ ಪ್ರಶಸ್ತಿ ನೀಡುವ ಕಾರ್ಯವಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕೈಪಿಡಿ ಬಿಡುಗಡೆ

ಸಹಕಾರ ಇಲಾಖೆಯ ಮಹಾಮಂಡಳದ ಕಾರ್ಯಚಟುವಟಿಕೆಗಳ ಕೈಪಿಡಿಯನ್ನು ಕಂದಾಯ ಸಚಿವರಾದ ಆರ್.ಅಶೋಕ್ ಅವರು ಹಾಗೂ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆಯನ್ನು ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜು ಬಿಡುಗಡೆಗೊಳಿಸಿದರು.

ಕಂದಾಯ ಸಚಿವರಾದ ಆರ್. ಅಶೋಕ್, ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಸ್.ಆರ್.ವಿಶ್ವನಾಥ್, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಂಬಂಧಕರಾದ ಎಸ್. ಜಿಯಾಉಲ್ಲಾ ಸೇರಿದಂತೆ ಹಿರಿಯ ಸಹಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಇದೇ ವೇಳೆ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರದಾನ ಮಾಡಿದರು.

Key words: CM’s -role -Covid’s -management –huge– Minister -S.T. Somashekhar ..