ಸಮ್ಮಿಶ್ರ ಸರ್ಕಾರ ಸುಭದ್ರ: ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ ಎಂದ ಸಿದ್ದರಾಮಯ್ಯ

ನವದೆಹಲಿ:ಮೇ-25:(www.justkannada.in) ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯ ಸಮ್ಮಿಶ್ರ ಸರ್ಕಾರ ಉರುಳುತ್ತಾ ಎಂಬ ಆತಂಕ ಎದುರಾಗಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಸ್ಥಿರವಾಗಿದೆ. ಯಾವುದೇ ಸಮಸ್ಯೆಗಳೂ ಇಲ್ಲ, ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ. ಸಿಎಂ ಆಗಿ ಅವರೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ(ಸಿಡಬ್ಲ್ಯೂಸಿ)ಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತ, ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಗಳೂ ಇಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಕುರಿತು ಮಾತನಾಡಿದ ಅವರು, ಈಗ ಚುನಾವಣಾ ಫಲಿತಾಂಶದ ಕುರಿತು ಕಾರಣಗಳನ್ನು ಹುಡುಕಲು ನಾವು ಹೋಗಲ್ಲ. ರಾಜ್ಯದಲ್ಲಿ ಪಕ್ಷಕ್ಕೆ ಒಂದು ಸೀಟು ಬಂದಿದೆ. ಜನರ ತೀರ್ಪನ್ನು ನಾವು ತಲೆಬಾಗಿ ಒಪ್ಪೊಕೊಂಡಿದ್ದೇವೆ ಎಂದರು.

ಇನ್ನು ರಾಜ್ಯದಲ್ಲಿ ಪಕ್ಷದ ಸೋಲಿನ ಬಗ್ಗೆ ಸಿಡಬ್ಯ್ಲೂ ಸಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಇಂದಿನ cwc ಸಭೆ ಅಜೆಂಡಾ ಏನೆಂಬುದು ಗೊತ್ತಿಲ್ಲ ಎಂದು ತಿಳಿಸಿದರು. ಇದೇ ವೇಳೆ ರಾಣೆಬೆನ್ನೂರು ಪಕ್ಷೆತರ ಶಾಸಕ ಆರ್ ಶಂಕರ್ ಕೂದ ಸಿದ್ದರಾಮಯ್ಯ ಜತೆ ದೆಹಲಿಯಲ್ಲಿ ಕಾಣಿಸಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ; ಕುಮಾರಸ್ವಾಮಿ ರಾಜೀನಾಮೆ ನೀಡಲ್ಲ ಎಂದ ಸಿದ್ದರಾಮಯ್ಯ
Coalition government,stable,siddaramaiah