ಎರಡು ಬೈಕ್ ಗಳ ನಡುವೆ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ…

Promotion

ಬಳ್ಳಾರಿ,ಜೂ,6,2019(www.justkannada.in): ಎರಡು ಬೈಕ್​​​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಮೂವರು ಸ್ಥಳದಲ್ಲಿಯೇ  ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಇಂದು ನಡೆದಿದೆ.

ಬಳ್ಳಾರಿ ತಾಲ್ಲೂಕಿನ ಕೂರ್ಲಗುಂದಿ ಕ್ರಾಸ್​​ ಬಳಿ ಈ ಘಟನೆ ನಡೆದಿದೆ. ನಜೀರಸಾಬ(30), ಪಂಪಾಪತಿ (48) ಮತ್ತು ಅಖಿಲ್​​​​​ (04) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅತಿ ವೇಗವಾಗಿ ಬಂದ ಎರಡು ಬೈಕ್​ಗಳು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.  ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಪ್ರಾಣ ಬಿಟ್ಟರೆ, ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯನ್ನ ​​​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Keywords: Collide between two bikes.Three dead on the spot

#ballari # bikes #accident  #death