ಕಾಲೇಜು ಬಸ್ ಮತ್ತು ಲಾರಿ ನಡುವೆ ಡಿಕ್ಕಿ: ಇಬ್ಬರು ಸಾವು: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ.

ಬೆಳಗಾವಿ,ಆಗಸ್ಟ್,20,2022(www.justkannada.in):  ಕಾಲೇಜು  ಬಸ್ ಮತ್ತು  ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ನಡೆದಿದೆ.

ಕಾಲೇಜು ಬಸ್ ಚಾಲಕ ಮತ್ತು ಲಾರಿ ಚಾಲಕ ಘಟನೆಯಲ್ಲಿ ಸಾವನ್ನಪ್ಪಿದ್ದು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.tractor-collision-bike-bike-rider-dies-on-the-spot-mysore

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Collision-between -college bus –lorry-two-death