ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ : ಇಬ್ಬರು ಸಾವು.

ತುಮಕೂರು,ಜುಲೈ,7,2022(www.justkannada.in): ಕೆಎಸ್ ಆರ್ ಟಿಸಿ ಬಸ್ ಮತ್ತು  ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಮತ್ತಿಹಳ್ಳಿ ಬಳೀ ಈ ಘಟನೆ ಸಂಭವಿಸಿದೆ. ಶಿವಮೊಗ್ಗದಿಂಧ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ತುಮಕೂರಿನಿಂದ ಅರಸಿಕೆರೆಗೆ ತೆರಳುತ್ತಿದ್ದ ಕಾರಿನ ನಡುವೆ ಮತ್ತಿಹಳ್ಳಿ ತಿರುವಿನಲ್ಲಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದರೇ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಕುರಿತು  ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Collision-between-KSRTC- bus -car.