ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ: 10 ಮಂದಿ ಸ್ಥಳದಲ್ಲೇ ದುರ್ಮರಣ.

ಮಹಾರಾಷ್ಟ್ರ,ಜನವರಿ,13,2023(www.justkannada.in): ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ 10 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ನಾಸಿಕ್-ಶಿರಡಿ ಹೆದ್ದಾರಿ ಬಳಿ ಈ ಘಟನೆ ನಡೆದಿದೆ. ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ್ಎ  ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಬಳಿ ಟ್ರಕ್‌ ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಬಸ್ ನಲ್ಲಿ 45 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸಾಯಿಬಾಬ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Key words: Collision- private bus – lorry-  10 people -died