ಲಾರಿ ಡಿಕ್ಕಿ: ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು….

Promotion

ಕಲ್ಬುರ್ಗಿ,ಜ,24,2020(www.justkannada.in):  ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.

ಕಲ್ಬುರ್ಗಿ ಜಿಲ್ಲೆ ಕಮಲಾಪುರ ತಾಲ್ಲೂಕಿನ ಕುದ್ರಿಮೊತಿಯಲ್ಲಿ ಈ ಘಟನೆ ನಡೆದಿದೆ. ರೋಷನ್ ವರ್ಗಿ(24), ಸಂತೋಷ್(20) ಮೃತಪಟ್ಟವರು. ಮೃತರು ಕಲ್ಬುರ್ಗಿ ನಗರದ ಜಗತ್ ಬಡವಾಣೆ ನಿವಾಸಿಗಳು. ಕಾರಿನಲ್ಲಿ ತೆರಳುತ್ತಿದ್ದ ವೇಳೆ  ಲಾರಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: collision – truck-  Two killed – car accident