ಕಳೆದ ಬಾರಿಯಂತೆ ಆಗಲ್ಲ: ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬನ್ನಿ- ಸಿದ‍್ಧರಾಮಯ್ಯಗೆ ಬೆಂಬಲಿಗರಿಂದ ಒತ್ತಡ.

Promotion

ಬೆಂಗಳೂರು,ಫೆಬ್ರವರಿ,2,2023(www.justkannada.in):  ಈ ಭಾರಿ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮಧ್ಯೆ ಈ ಬಾರಿಯೂ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುವಂತೆ ಬೆಂಬಲಿಗರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.

ಇಂದು ಬೆಂಗಳೂರಿನ ಸಿದ್ಧರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ  ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರು, ಕಳೆದ ಬಾರಿಯಂತೆ ಈ ಬಾರಿ ಆಗಲ್ಲ. ಹೀಗಾಗಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬನ್ನಿ. ಇಲ್ಲಿಂದಲೇ ಸ್ಪರ್ಧಿಸಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ ದೇವೇಗೌಡರ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ  ಸೋಲನುಭವಿಸಿದ್ದರು.

Key words: come – Chamundeshwari Constituency- Pressure – Siddhanaramaiah’s- supporters.