ಹೆದರಿಕೆ ಇಲ್ಲದೇ ಶಾಲೆಗೆ ಬನ್ನಿ ಮಕ್ಕಳೇ… ಸಿಎಂ ಬಸವರಾಜ ಬೊಮ್ಮಾಯಿ ಮನವಿ

Promotion

ಬೆಂಗಳೂರು, ಆಗಸ್ಟ್ 22, 2021 (www.justkannada.in): ಮಕ್ಕಳು ಆತಂಕಕ್ಕೆ ಒಳಗಾಗದೇ ಶಾಲೆಗಳಿಗೆ ಹಾಜರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋರಿದ್ದಾರೆ.

ಲೆ ಆರಂಭಕ್ಕೆ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಮಕ್ಕಳು ಹಾಗೂ ಪೋಷಕರು ಯಾವುದೇ ಆತಂಕ ಇಲ್ಲದೇ ಶಾಲೆಗೆ ಬರುವಂತೆ ತಿಳಿಸಿದ್ದಾರೆ.

ಕೋವಿಡ್ ಸುರಕ್ಷತೆಯೊಂದಿಗೆ ಶಾಲೆಗಳಲ್ಲಿ ಕಲಿಕೆ, ಶಾಲೆಗಳನ್ನು ಸ್ಯಾನಿಟೈಸ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಪರ್ಯಾಯ ದಿನಗಳಲ್ಲಿ ಅಥವಾ ಶಿಫ್ಟ್ನಲ್ಲಿ ತರಗತಿಗಳನ್ನು ನಡೆಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಶಾಲೆಗೆ ಆಗಮಿಸುವ ಮಕ್ಕಳಿಗೆ ಧೈರ್ಯ ತುಂಬಿ, ಮಕ್ಕಳ ಆರೋಗ್ಯದ ಬಗ್ಗೆ ಗಮನ ವಹಿಸಿ. ಶಾಲೆಗಳಲ್ಲಿ ಹಂತಹಂತವಾಗಿ ಮಕ್ಕಳ ಹಾಜರಾತಿ ಹೆಚ್ಚಬೇಕು ಎಂದಿದ್ದಾರೆ.