ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 250 ರೂ. ಏರಿಕೆ.

ನವದೆಹಲಿ,ಏಪ್ರಿಲ್,1,2022(www.justkannada.in):   ಪೆಟ್ರೋಲ್ ,ಡೀಸೆಲ್ ಬಳಿಕ ಇದೀಗ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯೂ ಏರಿಕೆಯಾಗಿದೆ. ವಾಣಿಜ್ಯ LPG ಸಿಲಿಂಡರ್‌ ಬೆಲೆ 250 ರೂ ಏರಿಕೆಯಾಗಿದೆ.

ಈ ಮೂಲಕ 19 ಕೆಜಿಯ LPG ಸಿಲಿಂಡರ್ ಬೆಲೆ 2,253 ರೂ.ಗೆ ಹೆಚ್ಚಳವಾಗಿದೆ. 2 ತಿಂಗಳಲ್ಲಿ 19 ಕೆಜಿ LPG ಸಿಲಿಂಡರ್ ಬೆಲೆ ಒಟ್ಟು 346 ರೂಪಾಯಿ ಏರಿಕೆಯಾಗಿದೆ. ಇನ್ನು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ವಾಣಿಜ್ಯ ಚಟುವಟಿಕೆಗಳು ಸಹಿತ ಹೊಟೇಲ್ ಉಪಹಾರ ಬೆಲೆಯಲ್ಲಿ ಏರಿಕೆ ಸಾಧ್ಯತೆ ಇದೆ ಎಂದು  ಹೇಳಲಾಗುತ್ತಿದೆ.

ಕಳೆದ ಸತತ 10 ದಿನಗಳಿಂದಲೂ ಪೆಟ್ರೋಲ್ ,ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿತ್ತು. ಇದೀಗ ಗ್ಯಾಸ್ ಸಿಲಿಂಡರ್ ಬೆಲೆಯಲ್ಲೂ ಏರಿಕೆಯಾಗಿದ್ದು, ಕಳೆದ 11 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್​ ಗೆ ಸರಾಸರಿ  6.40 ರೂ. ಹೆಚ್ಚಾಗಿದೆ. ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುತ್ತಿದ್ದಾರೆ.

Key words: Commercial –Use- Cylinder -Price – rise.