ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗ- ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ.

Promotion

ಬೆಂಗಳೂರು,ಅಕ್ಟೋಬರ್,14,2023(www.justkannada.in): ಬೆಂಗಳೂರಿನಲ್ಲಿ ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಐಟಿ ವೇಳೆ 40 ಕೋಟಿ ರೂಪಾಯಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ,  ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗವಾಗಿವೆ. ಗುತ್ತಿಗೆದಾರರು ಬಿಲ್ ​ಗಾಗಿ ರಾಜ್ಯಪಾಲರಿಗೆ ದೂರು ನೀಡಿದ್ದರು. ಆಗ ಬಿಲ್ ಹಣ ಕೊಡದೇ ಕಮಿಷನ್ ಕುದುರಿಸುವ ಕೆಲಸ ಆಗುತ್ತಿತ್ತು. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಅಪಾರ ಹಣ ಸಿಕ್ಕಿದೆ. ಈವರೆಗೂ ಗುತ್ತಿಗೆದಾರರ ಮನೆಯಲ್ಲಿ ಇಷ್ಟು ದೊಡ್ಡ ಹಣ ಸಿಕ್ಕಿರಲಿಲ್ಲ  ಎಂದು ಕಿಡಿಕಾರಿದರು.

Key words: Commission-lobbies – state – Former CM –Basavaraj Bommai