ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಪರಿಹಾರ ನೀಡಿ- ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ..

ಬೆಂಗಳೂರು,ಮೇ,24,2021(www.justkannada.in): ಕೋವಿಡ್ ನಿಂದ ಮೃತಪಟ್ಟ ಎಲ್ಲಾ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.jk

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ ಎಂದಿದ್ದಾರೆ.

145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ.

ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ  ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ.

ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ  ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ENGLISH SUMMARY…

Consider teachers who died of COVID as Corona warriors and announce compensation: Former CM HDK
Bengaluru, May 24, 2021 (www.justkannada.in): Former Chief Minister H.D. Kumaraswamy has demanded the State Government consider all the teachers who died of the COVID-19 Pandemic as Corona warriors and declare compensation to their families.compensation-teachers-covid-corona-warriors-former-cm-hd-kumaraswamy
In his tweet, the former CM mentioned that “In Hyderabad-Karnataka alone 145 teachers have lost their lives due to the pandemic while on duty. They were engaged in election-related works and the Vidyagama scheme. The exact number of teachers who have lost their lives due to the pandemic across the state is yet to be ascertained. The State Government should consider all the teachers who lost their lives due to the pandemic as Corona warriors and announced Rs.50 lakh compensation.”
Keywords: Former CM H.D. Kumaraswamy/ State Government/ teachers/ died/ COVID-19-Pandemic/ Corona warriors/ compensation

Key words: compensation – teachers – covid -Corona Warriors- Former CM-HD kumaraswamy