ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಮತ್ತು ಬೆಂಬಲಿಗರ ವಿರುದ್ಧ ದೂರು.

Promotion

ರಾಮನಗರ ಅಕ್ಟೋಬರ್,3,2022(www.justkannada.in): ಕಳೆದ ಎರಡ್ಮೂರು ದಿನಗಳ ಹಿಂದೆ ಚೆನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಮತ್ತು ಬೆಂಗಲಿಗರ ವಿರುದ್ಧ ಜೆಡಿಎಸ್ ದೂರು ನೀಡಿದೆ.

ಚನ್ನಪಟ್ಟಣ ಗ್ರಾಮಾಂತರ ಠಾಣೆಗೆ ಸಿಪಿ ಯೋಗೇಶ್ವರ್ ಮತ್ತು ಬೆಂಬಲಿಗರ ವಿರುದ್ಧ ತಾಲ್ಲೂಕು ಜೆಡಿಎಸ್ ವಿದ್ಯಾರ್ಥಿ ಘಟಕದ ಅಧ್ಯಕ್ಷ ಆಶೀಶ್  ದೂರುನೀಡಿದ್ದಾರೆ. ಸಿಪಿ ಯೋಗೇಶ್ವರ್ ಬೆಂಬಲಿಗರಾದ ರವೀಶ್, ಜಯಂತ್ ಜಯಕುಮಾರ್, ಸ್ವಾಮಿ, ಸುರೇಶ್, ನಂಜೇಶ್ ಶಿವಕುಮಾರ ವಿರುದ್ಧ ದೂರು ನೀಡಲಾಗಿದೆ.

ನನ್ನ ಕೊರಳಪಟ್ಟಿ ಹಿಡಿದು ಎಳೆದಾಡಿ ಬೆದರಿಕೆ ಹಾಕಿದ್ದಾರೆ. ನಿನ್ನ ನಿಮ್ಮವರನ್ನ ಕೊಲೆ ಮಾಡುತ್ತೇನೆ ಎಂದು ಪ್ರಾಣ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಎಂಎಲ್ ಸಿ ಸಿಪಿ ಯೋಗೇಶ್ವರ್ ಮತ್ತು ಬೆಂಬಲಿಗರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ.

ಚನ್ನಪಟ್ಟಣ ತಾಲ್ಲೂಕಿನ ರಾಂಪುರದಲ್ಲಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಕಾಮಗಾರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಆಹ್ವಾನಿಸದ ಹಿನ್ನೆಲೆ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

Key words:  Complaint-against -former minister- CP Yogeshwar