ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು.

Promotion

ಬೆಂಗಳೂರು,ಜನವರಿ,23,2023(www.justkannada.in):  ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಇಂದು ಲೋಕಾಯುಕ್ತಕ್ಕೆ ದೂರು ನೀಡಿದೆ.

ಬಿಜೆಪಿ ಎಂಎಲ್ ಸಿ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಸಿದ್ಧರಾಮಯ್ಯ ವಿರುದ‍್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಕಾಂಗ್ರೆಸ್ ಅವಧಿಯಲ್ಲಿ ಟೆಂಡರ್ ಶ್ಯೂರ್  ಕಾಮಗಾರಿಯಲ್ಲಿ ಅಕ್ರಮ ನಡೆದಿದೆ.  ಶೇ. 54 ರಷ್ಟು ಹೆಚ್ಚಾಗಿ ಹಣ ಬಿಡುಗಡೆ ಮಾಡಲಾಗಿದೆ. ಸಿದ್ಧರಾಮಯ್ಯ ಶೇ.50ಕ್ಕೂ ಹೆಚ್ಚು ಕಮಿಷನ್ ಪಡೆದಿದ್ದಾರೆ. ಇದೇ ರೀತಿ ಒಂದು ಪ್ರಕರಣ ಅಲ್ಲ, 10 ಪ್ರಕರಣ ಇದೆ. ನಿಮಗೆ ತಾಕತ್ ಇದ್ದರೇ ನೀವು ದೂರು ದಾಖಲಿಸಿ  ಎಂದು ಕಾಂಗ್ರೆಸ್ ಗೆ ಸವಾಲು ಹಾಕಿದರು.

Key words: Complaint – Lokayukta -against -former CM- Siddaramaiah.