ವಿದ್ಯುತ್ ದರ ಏರಿಕೆಗೆ ಖಂಡನೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ…

ಮೈಸೂರು,ನವೆಂಬರ್,17,2020(www.justkannada.in):  ರಾಜ್ಯದಲ್ಲಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನ ಕಾಂಗ್ರೆಸ್ ಖಂಡಿಸಿದೆ. ಈ ಕುರಿತು ಸರ್ಕಾರದ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.kannada-journalist-media-fourth-estate-under-loss

ಮೈಸೂರಿನ  ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಜನಗಳ ಅಭಿಪ್ರಾಯ ಸಂಗ್ರಹಿಸದೇ ಯೂನಿಟ್ ಗೆ 40 ಪೈಸೆ ಜಾಸ್ತಿ ಮಾಡಿದ್ದಾರೆ. ಇದರಿಂದ ಪ್ರತಿ ಬಡ ಕುಟುಂಬಕ್ಕೆ 80 ರೂಪಾಯಿ ಹೊರೆಯಾಗುತ್ತದೆ. ಮೇಲ್ನೋಟಕ್ಕೆ ನವೆಂಬರ್ 1ರಿಂದ ಬಂದಿಲ್ಲ. ಏಪ್ರಿಲ್ ನಿಂದಲೇ ಜಾರಿಗೆ ಬಂದಿದೆ. ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ತಿಳಿಸಿದರು.condemnation-electricity-price-hike-congress-spokesperson-m-laxman-government

ಕೇಂದ್ರ ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಈಗಾಗಲೇ ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಬುದ್ದಿ ಕಲಿತಿಲ್ಲ ಎಂದು  ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದರು.

ವಿದ್ಯುತ್ ದರ ಹೆಚ್ಚಳ ವಿರೋದಿಸಿ ನ.19 ರಂದು ಪ್ರತಿಭಟನೆ..

ನ.19 ರಂದು ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಲು ಜಿಲ್ಲಾ ಕಾಂಗ್ರೆಸ್ ನಿರ್ಧಾರ ಮಾಡಿದೆ . ಅಂದು ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತದೆ. ಬೆಳಿಗ್ಗೆ 11 ಗಂಟೆಗೆ ಪಕ್ಷದ ಮಾಜಿ ಶಾಸಕರು, ಎಲ್ಲಾ ಮುಖಂಡರು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಲ್ಲಿದ್ದಾರೆ ಎಂದು  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ ವಿಜಯ್ ಕುಮಾರ್ ಮಾಹಿತಿ ನೀಡಿದರು.

Key words: Condemnation –electricity- price- hike-Congress spokesperson- M Laxman -government.