ಉತ್ತರ ಪ್ರದೇಶದ ಘಟನೆಗೆ ಖಂಡನೆ: ಮೈಸೂರಿನಲ್ಲಿ ಸಂಸದರ ಕಚೇರಿ ಮುಂದೆ ರೈತ ಸಂಘದಿಂದ ಪ್ರತಿಭಟನೆ.

Promotion

ಮೈಸೂರು,ಅಕ್ಟೋಬರ್,8,2021(www.justkannada.in):  ಉತ್ತರ ಪ್ರದೇಶದಲ್ಲಿ ರೈತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಮೈಸೂರಿನಲ್ಲಿ ಸಂಸದರ ಕಚೇರಿ ಎದುರು ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.  

ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಕಚೇರಿ ಮುಂದೆ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ರೈತಮುಖಂಡರಯ ಧರಣಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ  ಆಕ್ರೋಶ ಹೊರ ಹಾಕಿದರು.

ಪ್ರತಿಭಟನೆಯ ವೇಳೆ ಮಾತನಾಡಿದ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಬಿಜೆಪಿ ನಾಯಕರು ಗೂಂಡಾ ವರ್ತನೆ ತೋರುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಸಮಯದಿಂದಲೂ  ಇತರ ದುರ್ವರ್ತನೆ ಹೆಚ್ಚಾಗಿದೆ. ಹರಿಯಾಣ ಮುಖ್ಯಮಂತ್ರಿ ಕೂಡ ರೈತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಕೂಡಲೇ ಹರಿಯಾಣ ಮುಖ್ಯಮಂತ್ರಿಯವರನ್ನ ವಜಾಗೊಳಿಸಬೇಕು. ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತಿದ್ದೇವೆ. ಉತ್ತರ ಪ್ರದೇಶದ ರೈತರ ಸಾವಿಗೆ ಕಾರಣರದವರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಸಂಸದರ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Key words: Condemnation – incident – Uttar Pradesh-Farmers’ Union -protest – MP’s office – Mysore